ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಗುರಿ ಸಾಧನೆ

ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಮೂರು ಜಿಲ್ಲೆಗಳು ಶೇ 100 ರಷ್ಟು ಗುರಿ ಸಾಧಿಸಿದ್ದು, ರಾಜ್ಯದ ಸರಾಸರಿ ಶೇ 96 ರಷ್ಟು ಇದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಒಟ್ಟಾರೆ ಮೊದಲ ಡೋಸ್ ವಿತರಣೆ ಶೇಕಡಾ 96 ರಷ್ಟಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ 4.9 ಕೋಟಿ ಜನರಲ್ಲಿ ಸುಮಾರು 4.7 ಕೋಟಿ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿಯೇ ( ಶೇ.127) ಅತೀ ಹೆಚ್ಚು ಜನರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದು, ನಂತರದ ಸ್ಥಾನ ಗದಗ (ಶೇ 102) ಹಾಗೂ ವಿಜಯಪುರ (ಶೇ 101) ಪಡೆದುಕೊಂಡಿದೆ. ಈ ನಡುವೆ, ಇತರ ಐದು ಜಿಲ್ಲೆಗಳು ಶೇ.100 ಮೊದಲ ಡೋಸ್ ವ್ಯಾಪ್ತಿಯನ್ನು ಪೂರ್ಣಗೊಳಿಸುವ ಅಂಚಿನಲ್ಲಿವೆ.

ಕೊಡಗು ಮತ್ತು ಬಾಗಲಕೋಟೆ ಜಿಲ್ಲೆಗಳು ಶೇ.99, ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಶೇ.98 ಗುರಿ ಸಾಧಿಸಿವೆ.

ಲಸಿಕೆ ವಿತರಣೆ ಹೊಸ ಮೈಲಿಗಲ್ಲಿನಲ್ಲಿ ರಾಜ್ಯವು ಅರ್ಹ ಜನಸಂಖ್ಯೆಯ ಶೇ.96ರಷ್ಟು ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಿದ್ದು, ಶೇ.80ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ವರ್ಷಾಂತ್ಯದ ವೇಳೆಗೆ ಎಲ್ಲಾ ಅರ್ಹ ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಡಾ.ಸುಧಾಕರ್ ಅವರು ಹೇಳಿದ್ದಾರೆ.

ನಗರದಲ್ಲಿ ಲಸಿಕೆ ವಿತರಣೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ತನ್ನ ವ್ಯಾಪ್ತಿಯ ಒಟ್ಟಾರೆ ಶೇ.91ರಷ್ಟು ಜನರಿಗೆ ಬಿಬಿಎಂಪಿ ಲಸಿಕೆಯನ್ನು ನೀಡಿದೆ. ಲಸಿಕೆ ವಿತರಣೆಯನ್ನು ತೀವ್ರವಾಗಿ ನಡೆಸಲು ವಿವಿಧ ಎನ್'ಜಿಒಗಳು ಕೂಡ ನೆರವು ನೀಡುತ್ತಿವೆ.

ಈ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ನಗರದಲ್ಲಿ ಪೂರ್ಣ ಪ್ರಮಾಣದ ಜನರಿಗೆ ಲಸಿಕೆ ನೀಡಲು ವಿವಿಧ ಎನ್‌ಜಿಒಗಳ ಸಹಯೋಗದಲ್ಲಿ ಆರು ಲಸಿಕೆ ವ್ಯಾನ್‌ಗಳಿಗೆ ಚಾಲನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಶೇ.60 ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ

2021 ರ ಅಂತ್ಯದ ವೇಳೆಗೆ ಶೇ.70ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ನೀಡುವ ಭರವಸೆಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com