ಮಂಗಳೂರು: ನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭಾನುವಾರ ನಡೆದಿದೆ.
ಸುಳ್ಯದ ಯೆನ್ಮೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರೀಶ್ ನಾಯ್ಕ್ ಎಂಬುವವರ ಮನೆಯ ಶೌಚಾಲಯದ ಗೋಡೆಯನ್ನು ಕಾರ್ಮಿಕರು ಕೆಡವುತ್ತಿದ್ದರು.
ಇಬ್ಬರು ಕಾರ್ಮಿಕರಾದ ಬಿಪಾತುಮ್ಮ(60) ಮತ್ತು ನೆಬಿಸಾ(45) ಇತರರೊಂದಿಗೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಶೌಚಾಲಯದ ಗೋಡೆ ಕುಸಿದು ಇಬ್ಬರೂ ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ಇಬ್ಬರನ್ನೂ ತಕ್ಷಣ ಪುತ್ತೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಈ ನಡುವೆ ಬೆಳ್ಳಾರೆ ಎಸ್‌ಐ ಆಂಜನೇಯ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement