ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ; ತಂದೆಗೆ ಜೀವಾವಧಿ ಶಿಕ್ಷೆ

ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿದೆ.
Published on

ಉಡುಪಿ:  ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿದೆ. ಅತ್ಯಾಚಾರ ಸಂತ್ರಸ್ತೆಗೆ ₹ 5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಉಡುಪಿಯಲ್ಲಿ 41 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂಬುದಕ್ಕೆ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಈ ಆದೇಶ ನೀಡಿದ್ದಾರೆ.

ತನ್ನ ಹೆಂಡತಿ ಮತ್ತು ಮಗನಿಲ್ಲದ ವೇಳೆಯಲ್ಲಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ  ಮೊದಲ ಬಾರಿಗೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಒಬ್ಬಳೇ ಇದ್ದಾಗ ಮತ್ತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ನೆರೆಹೊರೆ ಮನೆಯವರ ಸಹಾಯದಿಂದ ಬಾಲಕಿ ತನ್ನ ತಾಯಿಯ ಗಮನಕ್ಕೆ ತಂದು ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಅನ್ವಯ  ಆಕೆಯ ತಂದೆಯನ್ನು ಬಂಧಿಸಿದ ಪೊಲೀಸರು ಪೋಕ್ಸೋ ಕಾಯಿದೆ ದಾಖಲಿಸಿದ್ದರು. ಉಡುಪಿ ಮಹಿಳಾ ಪೊಲೀಸ್ ಠಾಣೆಯ ಅಂದಿನ ಸಿಪಿಐ ಸಿ ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, 11 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com