ಸಾಂದರ್ಭಿಕ ಚಿತ್ರ
ರಾಜ್ಯ
ರಾಷ್ಟ್ರೀಯ ರೈತರ ದಿನ: ಅನ್ನದಾತರಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿ ಬೊಮ್ಮಾಯಿ
ಇಂದು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನ್ನದಾತರಿಗೆ ಶುಭಾಶಯ ಕೋರಿದ್ದಾರೆ.
ಬೆಂಗಳೂರು: ಇಂದು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನ್ನದಾತರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಮಾಜಿ ಪ್ರಧಾನಿ ದಿ. ಚೌಧರಿ ಚರಣ್ ಸಿಂಗ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ರೈತ ಬಾಂಧವರಿಗೆ ರಾಷ್ಟ್ರೀಯ ರೈತರ ದಿನದ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.
ಅನ್ನದಾತ ರೈತನೇ ದೇಶದ ಬೆನ್ನೆಲುಬು. ಕೃಷಿಕರ ಬದುಕು ಹಸನಾದಾಗಲೇ ಸಮೃದ್ಧ ರಾಜ್ಯದ ಗುರಿ ನನಸಾಗುವುದು ಎಂದಿದ್ದಾರೆ.

