
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 348 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂರು ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,312ಕ್ಕೆ ಏರಿಕೆಯಾಗಿದೆ.
198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,58, 828ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,418 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನ ಪ್ರಮಾಣ ಶೇ. 0.47 ರಷ್ಟಿದ್ದು, ಮರಣ ಪ್ರಮಾಣ ಶೇ. 0.86 ರಷ್ಟಿದೆ. ಬೆಂಗಳೂರಿನಲ್ಲಿ 248 ಪ್ರಕರಣ ಪತ್ತೆಯಾಗಿದ್ದು, 88 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
Advertisement