ತೇಜಸ್ವಿ ಸೂರ್ಯ
ರಾಜ್ಯ
ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ
ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ
ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಂದೂ ಪುನರುಜ್ಜೀವನ ಮತ್ತು ಭಾರತದ ಇತಿಹಾಸದಲ್ಲಿ ಮತಾಂತರಗೊಂಡವರೆಲ್ಲರನ್ನು ಮರಳಿ ಹಿಂದೂ ಮಡಿಲಿಗೆ ಕರೆತರುವ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ