ವಿಧಾನಸೌಧ
ವಿಧಾನಸೌಧ

ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.
Published on

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.

2018-19ರ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 16ನೇ ಸ್ಥಾನದಲ್ಲಿತ್ತು. ಈ ವರ್ಷ 19ನೇ ಸ್ಥಾನಕ್ಕೆ ಕುಸಿದಿದೆ ಮತ್ತು ಒಟ್ಟಾರೆ ಸೂಚ್ಯಂಕದಲ್ಲಿ 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದೆ.

ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಕರ್ನಾಟಕವು ತೀವ್ರ ಕುಸಿತವನ್ನು ಕಂಡಿದೆ. ವಿವಿಧ ನಿಯತಾಂಕಗಳಲ್ಲಿ ರಾಜ್ಯದ ಒಟ್ಟಾರೆ ಸ್ಕೋರ್ 59.29 ರಿಂದ 57.93 ಕ್ಕೆ ಕುಸಿದಿದೆ.

ದೇಶಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸ್ಥಿತಿಯನ್ನು ಆಧರಿಸಿ, ಆರೋಗ್ಯ ಸೂಚ್ಯಂಕವನ್ನು ಬಿಡುಗಡೆ ಮಾಡಲಾಗಿದೆ. ದೊಡ್ಡ ರಾಜ್ಯಗಳ ಆರೋಗ್ಯ ಸೂಚ್ಯಂಕದಲ್ಲೊ ಕೇರಳ ಅತ್ಯುತ್ತಮ ಸಾಧನೆ ತೋರಿ, ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದರೆ ಕರ್ನಾಟಕ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದು, ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

ನೀತಿ ಆಯೋಗವು ಕಳೆದ ನಾಲ್ಕು ವರ್ಷಗಳಿಂದ ಈ ಸೂಚ್ಯಂಕ ಬಿಡುಗಡೆ ಮಾಡುತ್ತಿದ್ದು, 2019-20ರ ದಾಖಲೆಗಳನ್ನು ಆಧರಿಸಿ ಈಗ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com