ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಸಂಖ್ಯೆ 43ಕ್ಕೆ ಏರಿಕೆ: ಡಾ. ಕೆ.ಸುಧಾಕರ್

ರಾಜ್ಯದಲ್ಲಿ ಬುಧವಾರ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನಲ್ಲಿ ನಾಲ್ಕು ಹಾಗೂ ದಾವಣಗೆರೆ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದಾಗಿ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಐದು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನಲ್ಲಿ ನಾಲ್ಕು ಹಾಗೂ ದಾವಣಗೆರೆ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಸಂಖ್ಯೆ ದಿಢೀರ್ ಏರಿಕೆ: ಬೆಂಗಳೂರಿನಲ್ಲಿ 400 ಸೇರಿ 566 ಮಂದಿಗೆ ಪಾಸಿಟಿವ್, 6 ಸಾವು!
ಅಮೆರಿಕದಿಂದ ಬಂದಿರುವ ದಾವಣಗೆರೆಯ 22 ವರ್ಷದ ಯುವತಿ, ಕತಾರ್ ಮಾರ್ಗವಾಗಿ ಅಮೆರಿಕದಿಂದ ಬೆಂಗಳೂರಿಗೆ ಬಂದಿರುವ 24 ವರ್ಷದ ಯುವಕ, ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ 53 ವರ್ಷದ ಪುರುಷ, ದೋಹಾ ಮಾರ್ಗವಾಗಿ ಘಾನದಿಂದ ಬಂದಿರುವ 61 ವರ್ಷದ ಪುರುಷ ಹಾಗೂ ಮುಂಬೈಯಿಂದ ಬೆಂಗಳೂರಿಗೆ ವಿಮಾನ ಮೂಲಕ ಆಗಮಿಸಿದ 41 ವರ್ಷ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. 

ಎಲ್ಲಾ ಸೋಂಕಿತರನ್ನು ಐಸೋಲೇಷನ್ ನಲ್ಲಿ ಇಡಲಾಗಿದೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷಿಸಲಾಗಿದೆ ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇದರಿಂದ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 43ಕ್ಕೆ ಏರಿದೆ.

Related Stories

No stories found.

Advertisement

X
Kannada Prabha
www.kannadaprabha.com