ರಥಕ್ಕೆ ಬೆಂಕಿ ಹೊತ್ತಿಕೊಂಡಿರುವುದು
ರಾಜ್ಯ
ಬೆಳಗಾವಿ: ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ, ತಪ್ಪಿದ ಅನಾಹುತ
ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೆಳಗಾವಿ: ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ನಿನ್ನೆ (ಮಂಗಳವಾರ) ಶಿವಪೇಟೆ ಗ್ರಾಮದ ಜಡಿಶಂಕರಲಿಂಗ ದೇವರ ಜಾತ್ರೆ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯ ಪ್ರಯುಕ್ತ ಜಡಿ ಶಂಕರಲಿಂಗ ದೇವರ 38ನೇ ಮಹಾರಥೋತ್ಸವವಿತ್ತು.
ಈ ವೇಳೆ ಕೆಲ ಭಕ್ತರು ಪಟಾಕಿ ಸಿಡಿಸಿದ್ದು, ಪಟಾಕಿ ಕಿಡಿ ರಥಕ್ಕೆ ತಗುಲಿದೆ. ರಥಕ್ಕೆ ಬೆಂಕಿ ತಗುಲುತ್ತಿದ್ದಂತೆಯೇ ಎಚ್ಚೆತ್ತ ಗ್ರಾಮಸ್ಥರು ಕೂಡಲೇ ಬೆಂಕಿ ನಂದಿಸಿದ್ದಾರೆ.
ಬೆಂಕಿ ನಂದಿಸಿದ್ದರಿಂದಾಗಿ ಸ್ಥಳದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆದರೆ, ರಥಕ್ಕೆ ಬೆಂಕಿ ಹೊತ್ತಿಕೊಂಡಿದ್ದರ ಕುರಿತು ಭಕ್ತರಿಂದ ಬೇರೆ ಬೇರೆ ರೀತಿಯ ಮಾತುಗಳು ಕೇಳಿ ಬರುತ್ತಿವೆ. ರಥಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಅಪಶಕುನ ಎಂದು ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ