ಬೆಂಗಳೂರಿನಲ್ಲಿ ಕೇಳಿಬಂದ ಭಾರೀ ಶಬ್ಧ: ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನತೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಶಬ್ಧಕ್ಕೆ ಸಿಲಿಕಾನ್ ಸಿಟಿ ಜನತೆ ಬೆಚ್ಚಿಬಿದ್ದಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಶಬ್ಧಕ್ಕೆ ಸಿಲಿಕಾನ್ ಸಿಟಿ ಜನತೆ ಬೆಚ್ಚಿಬಿದ್ದಿದ್ದಾರೆ. 

ಬಿಡದಿ, ಬನಶಂಕರಿ, ಬ್ಯಾಟರಾಯನಪುರ, ಆರ್ ‌ಆರ್ ನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಶಬ್ಧ ಕೇಳಿಸಿದ ಅನುಭವ ಆಗಿದೆ ಎಂದು ಹೇಳಲಾಗುತ್ತಿದೆ. 

ಈ ಭಾರೀ ಶಬ್ಧಕ್ಕೆ ಎರಡು ಸೆಕೆಂಡುಗಳ ಕಾಲ ಕಿಟಕಿ, ಬಾಗಿಲು ಅಲುಗಾಡಿದ ಅನುಭವವೂ ಆಗಿದೆ. ಈ ಬಗ್ಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. 

ಕೆಲವರು ಹೇಳುವ ಪ್ರಕಾರ 12.23ರ ಸುಮಾರಿಗೆ ಸ್ಪೋಟದ ಸದ್ದು ಕೇಳಿದೆ. ಬಂಡೆ ಒಡೆದಾಗ ಬರುವ ಸದ್ದಿನಂತೆ ಕೇಳಿಸಿದ್ದು, ಈ ವೇಳೆ ಆಗಸದಲ್ಲಿ ಹಾರಾಡುತ್ತಿದ್ದ ಪಕ್ಷಿಗಳು ಆತಂಕಗೊಂಡು ಚೆಲ್ಲಾಪಿಲ್ಲಿಯಾಗಿ ಹಾರಿದ್ದು ಕಂಡಿ ಬಂದಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com