ಬೆಂಗಳೂರು: ಪತ್ನಿಯನ್ನು ಕೊಂದು ಸ್ಟ್ರೋಕ್ ನಿಂದ ಸತ್ತಿದ್ದಾಳೆಂದು ಕತೆ ಕಟ್ಟಿದ್ದ ಕಿರಾತಕನ ಬಂಧನ

ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆಗೈದು ಸ್ಟ್ರೋಕ್ ನಿಂದ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ ಪತಿಯ ಅಸಲಿ ಬಣ್ಣ ಬಯಲಾಗಿದ್ದು, ಆರೋಪಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆಗೈದು ಸ್ಟ್ರೋಕ್ ನಿಂದ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ ಪತಿಯ ಅಸಲಿ ಬಣ್ಣ ಬಯಲಾಗಿದ್ದು, ಆರೋಪಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಿಟಿಎಂ 2ನೇ ಹಂತದ ನಿವಾಸಿ ಅಜಿತ್ ತನ್ನ ಪತ್ನಿ ಸಾನಿಯಾಳನ್ನು ಕೊಲೆಗೈದು ಈಗ ಪೊಲೀಸರ ಅತಿಥಿಯಾಗಿದ್ದಾನೆ. ಎರಡು ವರ್ಷಗಳ ಹಿಂದೆ ಅಜಿತ್ ಹಾಗೂ ಸಾನಿಯಾ ಪ್ರೀತಿಸಿ ಮದುವೆಯಾಗಿದ್ದರು. 

ಆರಂಭದಲ್ಲಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ ಕೆಲ ತಿಂಗಳಿನಿಂದ ಆರೋಪಿ ಕುಡಿದು ಬಂದು ಆಕೆಯ ಶೀಲದ ಬಗ್ಗೆ ಶಂಕಿಸಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.

ಜೂನ್ 28 ರಂದು ಸಹ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಮನೆಯಲ್ಲಿದ್ದ ದೊಣ್ಣೆಯಿಂದ ಸಾನಿಯಾ ತಲೆಗೆ ಬಲವಾಗಿ ಹೊಡೆದು ಅಜಿತ್​ ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರ ಗಾಯಗೊಂಡು ಕುಸಿದು ಬಿದ್ದ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾನೆ. 

ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಳು, ಮನೆಯಲ್ಲಿ ಪತ್ನಿ ಸಾನಿಯಾ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಳು.  ನಂತರ ಆಕೆಗೆ ಸ್ಟ್ರೋಕ್ ಆಗಿ ಸಾವನ್ನಪ್ಪಿದ್ದಾಳೆ ಎಂದು ಪತ್ನಿಯ ಮನೆಯವರಿಗೆ ತಿಳಿಸಿದ್ದಾನೆ. 

ವೈದ್ಯರು ಮರಣೋತ್ತರ ಪರೀಕ್ಷೆಯಲ್ಲಿ ಬಲವಾಗಿ ಹೊಡೆದಿದ್ದರಿಂದ ಸಾನಿಯಾ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com