ಕೋವಿಡ್-19: ಬೆಂಗಳೂರಿನಲ್ಲಿ 715 ಸೇರಿ ರಾಜ್ಯದಲ್ಲಿಂದು 3104 ಹೊಸ ಪ್ರಕರಣ ದೃಢ, 4992 ಚೇತರಿಕೆ, 92 ಸಾವು

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.

4992 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 2784030ಕ್ಕೆ ಏರಿಕೆಯಾಗಿದೆ. 

ಸೋಂಕಿನಿಂದ ಇಂದು 92 ಮಂದಿ ಮೃತಪಟ್ಟಿದ್ದು, ಈವರೆಗಿನ ಒಟ್ಟಾರೇ ಮೃತರ ಸಂಖ್ಯೆ 35526ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 40016 ಆಗಿದೆ.ಪಾಸಿಟಿವಿಟಿ ದರ ಶೇ.2.65 ರಷ್ಟಿದ್ದರೆ, ಮರಣ ಪ್ರಮಾಣ ಶೇ.2.96 ರಷ್ಟಿದೆ.

ಬೆಂಗಳೂರಿನಲ್ಲಿ 715 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1863 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com