

ಬೆಂಗಳೂರು: ರಾಜ್ಯದಲ್ಲಿ ಇಂದು 2,743 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 75 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,601ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 611 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,17,507ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 12 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 3,081 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,87,111ಕ್ಕೆ ಏರಿಕೆಯಾಗಿದೆ. ಇನ್ನು 39,603 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,66,631 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,743 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.64ಕ್ಕೆ ಇಳಿದಿದೆ.