ಜಲಸಂಪನ್ಮೂಲ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ಎಚ್‌.ಡಿ. ರೇವಣ್ಣ ಆರೋಪ

ವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. 
ಎಚ್ ಡಿ ರೇವಣ್ಣ
ಎಚ್ ಡಿ ರೇವಣ್ಣ
Updated on

ಹಾಸನ: ವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. 

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ಅಂದಾಜಿನ ಆಧಾರದ ಮೇಲೆ ಅನಧಿಕೃತವಾಗಿ ಹೆಚ್ಚುವರಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅನೇಕ ಯೋಜನೆಗಳು ಪೂರ್ಣಗೊಂಡಿರುವ  ಪ್ರಮಾಣಪತ್ರಗಳನ್ನು ಪಡೆಯದೆ ಇದ್ದರೂ ಬಿಲ್ ಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. 

ಜಲಸಂಪನ್ಮೂಲ ಇಲಾಖೆಯ ಪರಿಷ್ಕೃತ ಅಂದಾಜಿನ ಆಧಾರದ ಮೇಲೆ ಅನೇಕ ಯೋಜನೆಗಳನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಇದರಲ್ಲಿ ಹಲವು ಯೋಜನೆಗಳನ್ನು ಉಪ ಗುತ್ತಿಗೆ ನೀಡಿ ಮಾಡಿಸಲಾಗಿದೆ. ಆದರೆ  ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿದ್ದರೂ ಬಿಲ್ ಮಂಜೂರು ಮಾಡಲಾಗಿದೆ ಎಂದು ಆರೋಪಿಸದರು. 

ಈ ಅಕ್ರಮದ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸುವಂತೆ ರೇವಣ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರನ್ನು ಒತ್ತಾಯಿಸಿದ್ದಾರೆ. 

ಕಳೆದ ಎರಡು ವರ್ಷಗಳಲ್ಲಿ 2500 ಕೋಟಿ ರೂ. ಮೌಲ್ಯದ ಗುತ್ತಿಗೆದಾರರ ಬಿಲ್‌ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ರೇವಣ್ಣ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com