ರೈತರು ಅನಧಿಕೃತ ಲೇವಾದೇವಿದಾರರಿಂದ ಸಾಲ ಪಡೆದು ಆತ್ಮಹತ್ಯೆಗೆ ಶರಣಾದರೆ ಪರಿಹಾರವಿಲ್ಲ: ರಾಜ್ಯ ಸರ್ಕಾರ 

ಸರ್ಕಾರದ ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಶರಣಾದರೆ ಪರಿಹಾರ ನೀಡುವುದಿಲ್ಲ ರಾಜ್ಯ ಸರ್ಕಾರ ಗುರುವಾರ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು; ಸರ್ಕಾರದ ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಶರಣಾದರೆ ಪರಿಹಾರ ನೀಡುವುದಿಲ್ಲ ರಾಜ್ಯ ಸರ್ಕಾರ ಗುರುವಾರ ಹೇಳಿದೆ. 

ಯಾದಗಿರಿ ಜಿಲ್ಲೆಯ ರೈತರೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ವಿಚಾರಣೆ ನಡೆದಿದ್ದ ವೇಳೆ ಖಾಸಗಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ.

ಇದರಂತೆ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿು ಹೇಳಿರುವ ರಾಜ್ಯ ಸರ್ಕಾರ ಇದಕ್ಕಾಗಿ ಷರತ್ತುಗಳನ್ನು ವಿಧಿಸಿದೆ. 

ಸರ್ಕಾರದಿಂದ ಅಧಿಕೃತ ಪರವಾನಿಗೆ ಹೊಂದಿದ ಖಾಸಗಿ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳು ಮತ್ತು ಚಿಟ್ ಫಂಡ್ ಗಳಿಂದ ಪಡೆದುಕೊಂಡ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಅಂತಹ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತದೆ. ಸರ್ಕಾರದ ಪರವಾನಿಗೆ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದುಕೊಂಡಿದ್ದರೆ ಪರಿಹಾರ ನೀಡುವುದಿಲ್ಲ ಎನ್ನಲಾಗಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com