ಪದವಿ ಕಾಲೇಜು ಆರಂಭ ಸದ್ಯಕ್ಕಿಲ್ಲ; ಶೇ.65.14ರಷ್ಟು ಕಾಲೇಜು ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ: ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ

ರಾಜ್ಯದಲ್ಲಿ ಪದವಿ ಕಾಲೇಜುಗಳ ತರಗತಿಗಳ ಆರಂಭದ ಬಗ್ಗೆ ಸದ್ಯ ಯಾವುದೇ ತೀರ್ಮಾನ ವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಡಾ.ಸಿ.ಎನ್. ಅಶ್ವತ್ಥ ನಾರಾಯಣ
Updated on

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ತರಗತಿಗಳ ಆರಂಭದ ಬಗ್ಗೆ ಸದ್ಯ ಯಾವುದೇ ತೀರ್ಮಾನ ವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸದ್ಯಕ್ಕೆ ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದು ಮಾತ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು. ಅದರ ಹೊರತಾಗಿ ಕಾಲೇಜುಗಳನ್ನು ಆರಂಭಿಸುವುದಲ್ಲ. ಕೊರೋನ ಇನ್ನೂ ಪೂರ್ಣವಾಗಿ ನಿವಾರಣೆ ಆಗದಿರುವ ಹಿನ್ನೆಲೆಯಲ್ಲಿ ಈ  ಬಗ್ಗೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎಂದರು.

ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ
ಇನ್ನು ರಾಜ್ಯದಲ್ಲಿ ಶೇ 65.14ರಷ್ಟು ಕಾಲೇಜು ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದರು. 'ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದು, ಈ ಪೈಕಿ ಈವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.  29,241 ಸಿಬ್ಬಂದಿ ಪೈಕಿ 24,875 ಜನ ಲಸಿಕೆ ಹಾಕಿಸಿಕೊಂಡಿದ್ದಾರೆ. ಈವರೆಗೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿ ಶೇ 65.14ರಷ್ಟು ಗುರಿ ತಲುಪಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಅಂತೆಯೇ 'ವಿದ್ಯಾರ್ಥಿಗಳ ಲಸಿಕೀಕರಣವನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್‌ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ  ಆದ್ಯತಾ ಗುಂಪಿನ ಅಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ. ಕೆಲ ದಿನಗಳಲ್ಲೇ ಶೇ.100ರಷ್ಟು ಗುರಿ ಸಾಧಿಸಲಾಗುತ್ತದೆ. ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬುದರ ಕುರಿತ ಅಂಕಿ-ಅಂಶ ಪಡೆದುಕೊಳ್ಳುತ್ತಿದ್ದೇವೆ. ಆ ಮಾಹಿತಿ ಸಿಕ್ಕ  ಕೂಡಲೇ ಉಳಿದ ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುತ್ತೇವೆ.

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಬಂದ್ ಆಗಿತ್ತು, ಕೊರೊನಾ ಇಳಿಕೆ ಬಳಿಕ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಿದ್ದರೂ ಶಾಲಾ ಕಾಲೇಜು ತೆರೆಯುವ ಬಗ್ಗೆ ಮಾತ್ರ ಇನ್ನೂ ಹಸಿರು ನಿಶಾನೆ ತೋರಿಲ್ಲ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com