ತೆರಿಗೆ ಸಂಗ್ರಹ (ಸಾಂಕೇತಿಕ ಚಿತ್ರ)
ತೆರಿಗೆ ಸಂಗ್ರಹ (ಸಾಂಕೇತಿಕ ಚಿತ್ರ)

ಸಾಂಕ್ರಾಮಿಕದ ನಡುವೆಯೂ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಅತ್ಯಲ್ಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪ್ರಕಾರ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಕೋವಿಡ್ ನಿಂದ ಅತ್ಯಲ್ಪ ಪರಿಣಾಮ ಉಂಟಾಗಿದೆ.

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹಲವರು ಬೆಂಗಳೂರು ತೊರೆದಿದ್ದಾರೆ. ಆದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪ್ರಕಾರ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಅತ್ಯಲ್ಪ ಪರಿಣಾಮ ಉಂಟಾಗಿದೆ.

ಜುಲೈ 9 ರ ದಾಖಲೆಗಳ ಪ್ರಕಾರ ಕಳೆದ ವರ್ಷ 1,747.93 ಕೋಟಿ ರೂಪಾಯಿಗಳಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದರೆ, ಈ ವರ್ಷ 1,759.85 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಕಳೆದ 10 ದಿನಗಳಲ್ಲಿ 50 ಕೋಟಿ ರೂಪಾಯಿಗಳಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದೆ.

ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜು, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ್ದು, ಕಳೆದ ವರ್ಷ ಸುಧಾರಣೆ ಶುಲ್ಕದ 95.05 ಕೋಟಿ ರೂಪಾಯಿಗಳು ಸೇರಿದಂತೆ ಒಟ್ಟಾರೆ 3,0015.06 ಕೋಟಿ ರೂಪಾಯಿಗಳಷ್ಟು ತೆರಿಗೆ ಸಂಗ್ರಹವಾಗಿದ್ದರೆ, ಈ ವರ್ಷ 4,000 ಕೋಟಿ ರೂಪಾಯಿ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

2020-21 ರಲ್ಲಿ ಆಸ್ತಿ ಮಾಲಿಕರು 892.73 ಕೋಟಿ ರೂಪಾಯಿಗಾನ್ನು ಆನ್ಲೈನ್ನಲ್ಲಿ ಪಾವತಿಸಿದ್ದರೆ 855.20 ಕೋಟಿ ರೂಪಾಯಿಗಳನ್ನು ಚಲನ್ ಗಳಲ್ಲಿ ಪಾವತಿಸಿದ್ದಾರೆ. 2021-22 ರಲ್ಲಿ 976.62 ಕೋಟಿ ರೂಪಾಯಿಗಳಷ್ಟು ಹಣವನ್ನು ಆನ್ ಲೈನ್ ನಲ್ಲಿ ಪಾವತಿಸಿದ್ದರೆ, 783.23 ಕೋಟಿ ರೂಪಾಯಿಗಳಷ್ಟು ಮೊತ್ತವನ್ನು ಚಲನ್ ಮೂಲಕ ಪಾವತಿಸಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕಳೆದ ವರ್ಷದ್ದೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿರುವ ಆಸ್ತಿ ತೆರಿಗೆಯಾಗಿದೆ. ಇದಕ್ಕಿಂತಲೂ ಮುನ್ನ 2,500 ಕೋಟಿ ರೂಪಾಯಿಗಳಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿತ್ತು.

2019ಕ್ಕೆ ಹೋಲಿಕೆ ಮಾಡಿದಲ್ಲಿ ಕಳೆದ ವರ್ಷ 150 ಕೋಟಿ ರೂಪಾಯಿ ಹೆಚ್ಚು ಆಸ್ತಿ ತೆರಿಗೆಯಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com