ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಿ: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ

ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಹೇಳಿದ್ದಾರೆ. 

ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಂಗಳವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಬೆಳಗಾವಿಯಲ್ಲಿ ಅಧಿವೇಶನ ನಡೆಯಬೇಕೆಂದು 15 ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಜೊತೆದೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆಯನ್ನೂ ನಡೆಸಿದ್ದೇನೆಂದು ಹೇಳಿದ್ದಾರೆ. 

2018ರ ಡಿಸೆಂಬರ್ ಬಳಿಕ ಈವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಹೀಗಾಗಿ ಅಧಿವೇಶನ ನಡೆಸುವಂತೆ ಮನವಿ ಮಾಡಲಾಗಿದೆ. ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಬೇಕೆಂಬ ಆಸೆ ನಮ್ಮದಿದೆ. ಹೀಗೆ, ಅಧಿವೇಶನ ಮಾಡಿ ಎಂದು ನಿರ್ದೇಶನ ಕೊಡುವ ಅಧಿಕಾರ ನಮಗಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದು,  ಸಚಿವ ಸಂಪುಟದಲ್ಲಿ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ತಿಳಿಸಿದ್ದಾರೆ. 

ಸದ್ಯ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ಕರೆಯಬಹುದೆಂಬ ಭರವಸೆ ಇದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಕರೆಯುವುದು ಸೂಕ್ತ ಎಂದಿದ್ದಾರೆ. 

ಇದೇ ವೇಳೆ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, ಬೆಳಗಾವಿಯಲ್ಲಿಯೇ ಚಳಿಗಾಲ ಅಧಿವೇಶನ ನಡೆಸುವಂತೆ ಆಗ್ರಹಿಸಿದರು.

ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಮನವಿ ಮಾಡಿಕೊಳ್ಳುತ್ತೇನೆ. ಹಲವಾರು ಕಾರಣಗಳಿಂದ ಕಳೆದ ಮೂರು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲಾಗಿಲ್ಲ. ಈ ಕುರಿತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೂ ಚರ್ಚೆ ನಡೆಸಲಾಗಿದೆ. ಮುಂದಿನ ವಾರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಲಿದ್ದೇವೆಂದು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com