ಚಾಲನಾ ಪರೀಕ್ಷೆ: ಕೇಂದ್ರ ಮೋಟಾರು ವಾಹನಗಳ ನಿಯಮ ಪಾಲಿಸದ ಅಧಿಕಾರಿಗಳು, ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. 

ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ನಿವಾಸಿ ಎಸ್.ಗೌರಿಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅರ್ಜಿದಾರರು ಅತ್ಯಂತ ಗಂಭೀರ ವಿಷಯ ಎತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.

ಕೆಲವು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ದಿನಕ್ಕೆ 75ರಿಂದ 100 ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ಗಮನಿಸಿದರೆ ನಿಯಮ 15ನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ’ ಎಂದು ಅರ್ಜಿದಾರರು ದೂರಿದರು.

ನಿಯಮ 15ರ ಪ್ರಕಾರ ಪ್ರತಿ ಪರೀಕ್ಷೆಯನ್ನೂ ಸೂಕ್ಷ್ಮವಾಗಿ ಪರಿಗಣಿಸಿ ಅಧಿಕಾರಿಗಳು ಅಭಿಪ್ರಾಯ ದಾಖಲಿಸಬೇಕು. ಅದೊಂದು ವಿಸ್ತೃತ ಪ್ರಕ್ರಿಯೆಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com