
ಬೆಂಗಳೂರು: ಕೋವಿಡ್ 2ನೇ ಅಲೆ ವೇಳೆ ಆಮ್ಲಜನಕ ಕೊರತೆ ಎದುರಿಸಿದ್ದರಿಂದ ಮುಂದಿನ ದಿನದಲ್ಲಿ ಈ ಸಮಸ್ಯೆ ಎದುರಾಗದಂತೆ ಕ್ರಮಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸುವವರಿಗೆ ವಿಶೇಷ ಪ್ರೋತ್ಸಾಹ ನೀಡಲು ಮುಂದಾಗಿದೆ.
ಆಮ್ಲಜನಕ ಘಟಕ ಸ್ಥಾಪನೆ ಮಾಡುವವರಿಗೆ ಶೇ.25ರಷ್ಟುಬಂಡವಾಳ ಸಬ್ಸಿಡಿ, ವಿದ್ಯುತ್ ಶುಲ್ಕದಿಂದ ಮೂರು ವರ್ಷದವರೆಗೆ ಪೂರ್ಣ ವಿನಾಯಿತಿ, ಸ್ಟ್ಯಾಂಪ್ ಡ್ಯೂಟಿಯಿಂದ ಸಂಪೂರ್ಣ ವಿನಾಯಿತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಸವರಾಜ ಬೊಮ್ಮಾಯಿಯವರು, ಕೊರೋನಾ 2ನೇ ಅಲೆ ವೇಳೆ ರಾಜ್ಯವು ಆಕ್ಸಿಜನ್ ಕೊರತೆ ಸಮಸ್ಯೆ ಎದುರಿಸುತ್ತು. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಂಭತ್ತು ಆಮ್ಲಜನಕ ಉತ್ಪಾದನಾ ಘಟಕಗಳಿವೆ. ಈ ಪೈಕಿ ಆರು ಘಟಕಗಳು ಆಮ್ಲಜನಕ ಪೂರೈಕೆ ಮಾಡುತ್ತಿವೆ. 815 ಮೆಟ್ರಿನ್ ಟನ್ ಉತ್ಪಾದನಾ ಸಾಮರ್ಥ್ಯ ಇದ್ದು, 5780 ಮೆಟ್ರಿಕ್ ಟನ್ ಸಂಗ್ರಹಣಾ ಸಾಮರ್ಥ್ಯ ಇದೆ. ಈ ಎರಡನ್ನೂ ಹೆಚ್ಚಿಸಲು ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಕೆಲ ನಿರ್ಧಾರಗಳು ಇಂತಿವೆ...
Advertisement