ಫಲಾನುಭವಿಗಳಿಗೆ ಶೀಘ್ರದಲ್ಲೇ ಕೋವಿಡ್ ಪರಿಹಾರ: ಡಿ.ಕೆ.ಶಿವಕುಮಾರ್

ಕೋವಿಡ್-19 ಸಂತ್ರಸ್ತರಿಗೆ ಪರಿಹಾರ ವಿತರಿಸದ ರಾಜ್ಯ ಸರ್ಕಾರದ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಸಿಂಧಗಿ ತಾಲೂಕಿಗೆ ಆಗಮಿಸಿದ ಡಿಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದ ಎಂಬಿ.ಪಾಟೀಲ್
ಸಿಂಧಗಿ ತಾಲೂಕಿಗೆ ಆಗಮಿಸಿದ ಡಿಕೆ.ಶಿವಕುಮಾರ್ ಅವರನ್ನು ಸ್ವಾಗತಿಸಿದ ಎಂಬಿ.ಪಾಟೀಲ್
Updated on

ವಿಜಯಪುರ: ಕೋವಿಡ್-19 ಸಂತ್ರಸ್ತರಿಗೆ ಪರಿಹಾರ ವಿತರಿಸದ ರಾಜ್ಯ ಸರ್ಕಾರದ ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರದಲ್ಲಿ ಕೋವಿಡ್'ನಿಂದ ಬಳಲುತ್ತಿದ್ದಾರೆ. ದೀನ ದಲಿತರು, ಅಲ್ಪಸಂಖ್ಯಾತರು, ಅಸಂಘಟಿತ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಇನ್ನೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ ಜನರ ಕುಂದು ಕೊರತೆ ಆಲಿಸಲು ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದೇನೆಂದು ಹೇಳಿದ್ದಾರೆ. 

ಜನರ ಕುಂದು ಕೊರತೆಗಳನ್ನು ನಾನೇ ಖುದ್ದಾಗಿ ಆಲಿಸಲು ಬಂದಿದ್ದೇನೆ. ನನ್ನ ಪ್ರವಾಸ ಚುನಾವಣೆಗೋಸ್ಕರವಲ್ಲ. ನಮಗೆ ರಾಜಕಾರಣ ಮುಖ್ಯವಲ್ಲ. ದಲಿತ ಸಮುದಾಯದ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲು ಪ್ರವಾಸ ಕೈಗೊಂಡಿರುವುದ್ದೇನೆ. ಕಾಂಗ್ರೆಸ್ ಒತ್ತಡ ಹೇರಿದ್ದರಿಂದ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಶೀಘ್ರದಲ್ಲೇ ಆ ಪರಿಹಾರ ಪಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ನೀಡಿದ್ದಕ್ಕಾಗಿ ಶಾಸಕ ಎಂ ಬಿ ಪಾಟೀಲ್ ಅವರನ್ನು ಶ್ಲಾಘಿಸಿದ್ದಾರೆ.

ಬಳಿಕ ದಲಿತ ಸಂಘರ್ಷ ಸಮಿತಿಯ ಸದಸ್ಯ ಮಯೂರ್ ಅವರು ಮಾತನಾಡಿ, ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಸರ್ಕಾರ ನಿಲ್ಲಿಸಿದೆ. ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳು ಈ ವಿಷಯದ ಕುರಿತು ಧ್ವನಿ ಎತ್ತಬೇಕು. ಇದಲ್ಲದೆ ಇತ್ತೀಚೆಗಷ್ಟೇ ನಿಧನರಾದ ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವಲ ಕೆಲಸವನ್ನು ಕಾಂಗ್ರೆಸ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com