

ವಿಜಯನಗರ: ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ 87 ವರ್ಷದ ಪೃಥ್ವಿರಾಜ್ ಸಿಂಗ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾದರೆ.
ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.