ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.
ವಿಧಾನಸೌಧ
ವಿಧಾನಸೌಧ
Updated on

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2021-22 ನೇ ಸಾಲಿನ ಆಯವ್ಯಯ ಕಂಡಿಕೆ-148ರಲ್ಲಿ ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಸರ್ಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com