ಅನ್ ಲಾಕ್ 4.O: ನಾಳೆಯಿಂದಲೇ ಥಿಯೇಟರ್ ಓಪನ್, ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭ, ನೈಟ್​ ಕರ್ಫ್ಯೂ 1 ಗಂಟೆ ಸಡಿಲ

ರಾಜ್ಯದಲ್ಲಿ ಅನ್ ಲಾಕ್  4.O ಜಾರಿಗೆ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ.  ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್  4.O ಜಾರಿಗೆ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ.  ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.

ಅಧಿಕೃತ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಸಡಿಲಗೊಳಿಸಿ ರಾತ್ರಿ  10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿಧಿಸಿ ಆದೇಶಿಸಿದ್ದಾರೆ.

ಸಿನಿಮಾ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಸೀಟುಗಳ ಭರ್ತಿಯೊಂದಿಗೆ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ.

ಪದವಿ ತರಗತಿಗಳನ್ನು ಜುಲೈ 26ರಿಂದ ಪ್ರಾರಂಬಿಸಲು ಆದೇಶಿಸಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೋನಾ ಲಸಿಕೆ ಪಡೆದು ತರಗತಿಗಳಿಗೆ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com