ಸಾವನ್ನಪ್ಪಿದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್
ಸಾವನ್ನಪ್ಪಿದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ಸಾವು

ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 
Published on

ಬೆಂಗಳೂರು: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಆರ್'ಟಿಐ ಕಾರ್ಯಕರ್ತ ವೆಂಕಟೇಶ್ (50) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪಟ್ಟಣದ ನಿವಾಸಿ, ಆರ್ಟಿಐ ಕಾರ್ಯಕರ್ತ ವೆಂಕಟೇಶ್ ಎಂಬುವವರ ಮೇಲೆ ಕಳೆದ ಗುರುವಾರ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರ ಬಲಗೈ ಹಾಗೂ ಬಲ ಕಾಲನ್ನು ಕತ್ತರಿಸಿದ್ದರು, ಪರಾರಿಯಾಗಿದ್ದರು. 

ಹಲ್ಲೆಗೊಳಗಾಗಿದ್ದ ವೆಂಕಟೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಿದ್ದಾರೆ. ಇದರಂತೆ ಹಲ್ಲೆ ನಡೆಸಿದವರ ಕುರಿತು ಮಾಹಿತಿ ಕಲೆಹಾಕಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com