ಬೆಂಗಳೂರು: ಧಾರಾಕಾರ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಮೃತರು.
ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿದ್ದ ಮನೆ ಮೇಲೆ ಕುಸಿದಿದ್ದು ಘಟನೆಯಲ್ಲಿ ಸಂಪ್ರಥ್ (22) ಎಂಬ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಜಾಗದ ಮಾಲೀಕನನ್ನು ವಿಚಾರಣೆ ನಡೆಸುತ್ತಿದ್ದಾರೆ.
Advertisement