ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ಸ್ನೇಹಿತರ ದುರ್ಮರಣ

ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿಂದು ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕಲಬುರಗಿ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿಂದು ನಡೆದಿದೆ. 

ಕಲಬುರಗಿಯ ಹೊರವಲಯದ ಕೋಟನೂರ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ  ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಇಂದು ನಸುಕಿನ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಕಲಬುರಗಿಯಿಂದ ಜೇವರ್ಗಿ ಕಡೆ ಹೊರಟಿದ್ದ ಲಾರಿ ಎದುರಿನಿಂದ ಬರುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಉಲ್ಲಾಸ್ (28), ರಾಹುಲ್ (24), ಕಾಶಿಂ (26) ಮೃತ ದುರ್ದೈವಿಗಳು, ಇನ್ನೋರ್ವನ ಗುರುತು ಇನ್ನು ಪತ್ತೆಯಾಗಿಲ್ಲ.  

ಗಂಭೀರ ಗಾಯಗೊಂಡ ಯುವಕನನ್ನ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಕಲಬುರಗಿಯ ಸಂಚಾರಿ ಪೊಲೀಸ್ ಠಾಣೆ 2ರಲ್ಲಿ  ಪ್ರಕರಣ ದಾಖಲು ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com