ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತ, ಇಬ್ಬರು ಸಾವು

ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಇಬ್ಬರು ಮುಖಂಡರು ಚಿಕ್ಕಮಗಳೂರಿನ ರಾಮನಹಳ್ಳಿ ಸಮೀಪ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾಜ್ಯ ರೈತ ಸಂಘದ ಮುಖಂಡರಾದ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿಯ ರಾಮಸ್ವಾಮಿ (72) ಸ್ಥಳದಲ್ಲೇ ಮೃತಪಟ್ಟಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಎಚ್‌.ಮೊಗೇನಹಳ್ಳಿ ಗ್ರಾಮದ ಎಂ.ರಾಮು (65) ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ  ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆಯ‌ ನವಲಗುಂದದಲ್ಲಿ ನಡೆದ ರೈತ ಹುತಾತ್ಮ‌ ದಿನಾಚರಣೆಯಲ್ಲಿ‌ ಪಾಲ್ಗೊಂಡು ಹಾಸನ ಜಿಲ್ಲೆಯ‌ ಬೇಲೂರಿಗೆ ಬರುತ್ತಿದ್ದ ವೇಳೆ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com