ಮಠಾಧೀಶರುಗಳ ಶಕ್ತಿ ಪ್ರದರ್ಶನ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರ ಸಮಾವೇಶ 

ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಸಮಾವೇಶ
ಅರಮನೆ ಮೈದಾನದಲ್ಲಿ ನಡೆದ ಸಮಾವೇಶ
Updated on

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಬಾರದೆಂಬ ಒತ್ತಡ ಮಠಾಧೀಶರುಗಳಿಂದ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆದಿದ್ದು ಹಲವು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ. ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಎಂಬ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ನೀಡಬಾರದು ಎಂದು ಮಠಾಧೀಶರು ಸಮಾವೇಶದ ಮೂಲಕ ಬಿಜೆಪಿ ಹೈಕಮಾಂಡ್ ಗೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಹಿಂದೆ ಬಿಎಸ್ ವೈ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com