ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಜೆಡಿಎಸ್ ನಿಂದ ಪ್ರಸ್ತಾವನೆ ಸಲ್ಲಿಕೆ

ಜೆಡಿಎಸ್‌ನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.
ರಾಜ್ಯಪಾಲರನ್ನು ಭೇಟಿಯಾದ ಜೆಡಿಎಸ್ ಮುಖಂಡರು
ರಾಜ್ಯಪಾಲರನ್ನು ಭೇಟಿಯಾದ ಜೆಡಿಎಸ್ ಮುಖಂಡರು
Updated on

ಬೆಂಗಳೂರು: ಮೇಕೆದಾಟು ಯೋಜನೆ,  ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಮಹದಾಯಿ ಯೋಜನೆಯ ಅನುಮೋದನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪಕ್ಷದ ಶಾಸಕಾಂಗಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿಯವರ ನೇತೃತ್ವದಲ್ಲಿ ಜೆಡಿಎಸ್‌ನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,ರಾಜ್ಯಪಾಲರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳ ಅನುಮೋದನೆಗಾಗಿ ಮನವಿ ಸಲ್ಲಿಸಿದ್ದೇವೆ.ಈಗಾಗಲೇ 2013 ರಲ್ಲಿ ಕೃಷ್ಣ ಟ್ರಿಬ್ಯುನಲ್ ಎರಡನೇ ತೀರ್ಪು ಬಂದಿದ್ದು,130 ಟಿಎಂಸಿ ನೀರು ಉಪಯೋಗಕ್ಕೆ ಅವಕಾಶ ಕೊಡಲಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆ ಪ್ರಾರಂಭಕ್ಕೆ ಅನುಮತಿ‌ ನೀಡಲಾಗಿದೆ.ಆದರೆ 2_013 ರಿಂದ ಗೆಜೆಟ್ ನೋಟಿಫಿಕೇಷನ್ ಆಗಿಲ್ಲ.ಹೀಗಾಗಿ ಕೇಂದ್ರ ಸರ್ಕಾರ ಕಣ್ಣು ತೆರೆಸುವ ಕೆಲಸ ಮಾಡಿದ್ದೇವೆ ಎಂದರು.

ಈ ಸಂಬಂಧ ಪಕ್ಷದ ರಾಷ್ಟ್ರೀಯ ನಾಯಕ ಹೆಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿ ಮೋದಿ ಭೇಟಿ ಹಾಗೂ ರಾಷ್ಟ್ರಪತಿಗಳ ಭೇಟಿಗೆ ಚಿಂತನೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com