ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮತ್ತೆ ನಾಪತ್ತೆ

ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ನಡೆದಿದ್ದು, ನದಿಗೆ ಹಾರಿರುವ ಸಂಶಯಗಳು ವ್ಯಕ್ತವಾಗಿವೆ.
ಸೇತುವೆ ಬಳಿ ಪತ್ತೆಯಾಗಿರುವ ಬೈಕ್
ಸೇತುವೆ ಬಳಿ ಪತ್ತೆಯಾಗಿರುವ ಬೈಕ್
Updated on: 

ಮಂಗಳೂರು: ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ನಡೆದಿದ್ದು, ನದಿಗೆ ಹಾರಿರುವ ಸಂಶಯಗಳು ವ್ಯಕ್ತವಾಗಿವೆ,

ಬೆಂಗಳೂರು ದಾಸರಹಳ್ಳಿ ಮೂಲದ ಸತ್ಯವೇಲು (29) ನಾಪತ್ತೆಯಾದ ಯುವಕ. ಈತ ಸುಮಾರು 15 ದಿನಗಳ ಹಿಂದೆ ಇದೇ ರೀತಿ ನದಿಗೆ ಹಾರುವುದಕ್ಕೆ ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದರು, ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.

ಆತನ ಬೈಕ್ ಇದೀಗ ಮತ್ತೆ ಪಾಣೆಮಂಗಳೂರು ಸೇತುವೆಯ ಮೇಲೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೈಕ್ ಸ್ಟಾರ್ಟ್ ನಲ್ಲೇ ಇತ್ತು ಎನ್ನಲಾಗಿದೆ. ಬಳಿಕ ಎ.ಎಸ್.ಐ ದೇವಪ್ಪ ಹಾಗೂ ಎಚ್‌ಸಿ ಸುರೇಶ ಪಡಾರ್ ಮಾಹಿತಿ ಪಡೆದು ಬೈಕನ್ನು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

ಆತನ ನಾಪತ್ತೆಯ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com