ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ

ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಶನಿವಾರ ಕೂಡ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. 

ಆಗ್ನೇಯ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂ ಬೆಳಗ್ಗೆ ಶಾಕ್​ ನೀಡಿದ್ದಾರೆ. 

ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ಗಳ ಮನೆ ಮೇಲೆ ಆಗ್ನೇಯ ವಿಭಾಗ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಕುಖ್ಯಾತ ರೌಡಿ ಆಸಾಮಿಗಳಾದ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 18 ರೌಡಿಶೀಟರ್​ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com