ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ: ಮತ್ತೋರ್ವ ಆರೋಪಿಗೆ ಗುಂಡೇಟು, ಬಂಧನ

ಕೊರೋನಾ ಸಾಂಕ್ರಾಮಿಕದ ನಡುವೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ ಮತ್ತೋರ್ವ ಆರೋಪಿಯನ್ನು ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೋನಾ ಸಾಂಕ್ರಾಮಿಕದ ನಡುವೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗ್ಯಾಂಗ್ ರೇಪ್ ಪ್ರಕರಣ ಮತ್ತೋರ್ವ ಆರೋಪಿಯನ್ನು ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಪ್ರಮುಖ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ ಶೂಬೂಜ್ (30)ನನ್ನು ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ. ಪೊಲೀಸರು  ಆರೋಪಿ ಶೂಬೂಜ್ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಹೀಗಾಗಿ ಪೊಲೀಸರು ಆತನ ಮೇಲೆ ಗುಂಡುಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಪೇಪರ್ ಆಯುವವರ ಶೆಡ್​ನಲ್ಲಿ ಆರೋಪಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಇಂದು ಬೆಳಗಿನ ಜಾವ ಅರೋಪಿ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಉಚ್ಚೆ ಮಾಡಲು ಅರ್ಜೆಂಟ್ ಆಗುತ್ತಿದೆ ಎಂದು ಹೇಳಿದ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಈ  ವೇಳೆ  ಶರಣಾಗುವಂತೆ ಆರೋಪಿಗೆ ಹೇಳಿದರು. ಆದರೆ ಪೊಲೀಸರ ಮಾತನ್ನು ಕೇಳದ ಶೂಬೂಜ್ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಈ ವೇಳೆ ಪಿಎಸ್ಐ ಶಿವರಾಜ್ ಮತ್ತು ದೇವೇಂದ್ರ ನಾಯಕ್​ಗೆ ಗಾಯವಾಗಿದೆ. ಶರಣಾಗಲು ಪೊಲೀಸರು ತಿಳಿಸಿದರೂ ಕೇಳದ ಹಿನ್ನೆಲೆ ಆರೋಪಿಯ  ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ರಾಂಪುರ ಬಳಿಯಲ್ಲಿ ಈ ಘಟನೆ ನಡೆದಿದ್ದು, ಕೆ.ಆರ್.ಪುರಂ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 

ಈ ಹಿಂದೆಯೂ ಕೂಡ ಇದೇ ಪ್ರಕರಣದ ಆರೋಪಿಗಳನ್ನು ಗುಂಡು ಹಾರಿಸಿ ಬಂಧಿಸಲಾಗಿತ್ತು. ಅಲ್ಲದೆ ಬಂಧಿತ ಎಲ್ಲ ಆರೋಪಿಗಳೂ ಕೂಡ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com