ಕೋವಿಡ್ ನಿಯಮ ಉಲ್ಲಂಘನೆ: ಧಾರವಾಡ ಪಾಲಿಕೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ 10 ಸಾವಿರ ರೂ. ದಂಡ

ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ಕಾಂಗ್ರೆಸ್ ವತಿಯಿಂದ ಫುಡ್ ಕಿಟ್ ನ್ನು ಧಾರವಾಡದಲ್ಲಿ ವಿತರಿಸಿದ ಡಿ ಕೆ ಶಿವಕುಮಾರ್
ಕಾಂಗ್ರೆಸ್ ವತಿಯಿಂದ ಫುಡ್ ಕಿಟ್ ನ್ನು ಧಾರವಾಡದಲ್ಲಿ ವಿತರಿಸಿದ ಡಿ ಕೆ ಶಿವಕುಮಾರ್

ಹುಬ್ಬಳ್ಳಿ-ಧಾರವಾಡ: ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೊನ್ನೆ ಮೇ 31ರಂದು ಡಿ ಕೆ ಶಿವಕುಮಾರ್ ಸಾಯಂಕಾಲ ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಂಬ್ಯುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.

ಅಲ್ಲದೆ ಧಾರವಾಡದಲ್ಲಿ ಕಾಂಗ್ರೆಸ್ ವತಿಯಿಂದ ಬಡವರಿಗೆ ಫುಡ್ ಕಿಟ್ ಒದಗಿಸಿದ್ದರು. ಈ ವೇಳೆ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು. ಸಾಮಾಜಿಕ ಅಂತರ ಕಾಪಾಡದೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com