ಸಿಡಿ ಪ್ರಕರಣದಲ್ಲಿ ಸರ್ಕಾರ ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿದೆ: ಡಿ.ಕೆ. ಶಿವಕುಮಾರ್ ಆರೋಪ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಪಟ್ಟ ಸಿಡಿ ಕೇಸಿನಲ್ಲಿ ಅವರನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Updated on: 

ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಪಟ್ಟ ಸಿಡಿ ಕೇಸಿನಲ್ಲಿ ಅವರನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಹಾಸನದಲ್ಲಿಂದು ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಕೇಸಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಯಿಂದಲೇ ರಮೇಶ್ ಜಾರಕಿಹೊಳಿಯನ್ನು ಈ ಪ್ರಕರಣದಲ್ಲಿ ರಕ್ಷಣೆ ಮಾಡಲು ಹೊರಟಿದ್ದಾರೆ ಎಂದು ತಿಳಿಯುತ್ತದೆ ಎಂದು ಆರೋಪಿಸಿದರು.

ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ.ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ನಮ್ಮದೇ ರೀತಿಯಲ್ಲಿ ಹೋರಾಟ ಮಾಡುತ್ತೇವೆ, ಆರೋಪಿಗೆ ಶಿಕ್ಷೆಯಾಗಲೇ ಬೇಕು, ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದರು.

ಇದೇ ಸಂದರ್ಭದಲ್ಲಿ ಕೊರೋನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಕೂಡ ಶಿವಕುಮಾರ್ ದೂರಿದರು. ಸಚಿವರ ಮಾತು ಕೇಳಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com