ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ

ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಗುರುವಾರ ರಾಜೀನಾಮೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆಯಿಂದ ಬೇಸತ್ತು ಶಿಲ್ಪಾ ನಾಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 
ಶಿಲ್ಪಾ ನಾಗ್
ಶಿಲ್ಪಾ ನಾಗ್

ಮೈಸೂರು: ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಗುರುವಾರ ರಾಜೀನಾಮೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆಯಿಂದ ಬೇಸತ್ತು ಶಿಲ್ಪಾ ನಾಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೈಸೂರಿನಲ್ಲಿ ಕೆಲಸ ಮಾಡಲು ಅನುಕೂಲಕರ ವಾತಾವರಣವಿಲ್ಲ, ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕಳುಹಿಸಿದ್ದೇನೆ ಎಂದರು.

ಸೂಕ್ತವಾಗಿ ಕೊರೋನಾ ನಿರ್ವಹಣೆ ಮಾಡಿದ್ರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದರು. ಶಿಲ್ಪಾ ನಾಗ್ ಅವರು 2014ರ ಬ್ಯಾಚಿನ್ ಐಎಎಸ್ ಅಧಿಕಾರಿಯಾಗಿದ್ದು, ಫೆಬ್ರವರಿ 2021ರಿಂದ ಮೈಸೂರು ನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಮಧ್ಯೆ ಶಿಲ್ಪಾ ನಾಗ್ ರಾಜೀನಾಮೆ ವಿಚಾರವಾಗಿ ಪಾಲಿಕೆ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದು, ಶಿಲ್ಪಾ ನಾಗ್ ಅವರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್ ಎಂದು ತಮ್ಮ ವೈಯಕ್ತಿಕ ಭಾವಚಿತ್ರದೊಂದಿಗೆ ಫೋಸ್ಟ್ ಹಂಚಿಕೊಳ್ಳುತ್ತಿದ್ದಾರೆ.

ಶಿಲ್ಪಾ ನಾಗ್ ರಾಜೀನಾಮೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಿಲ್ಪಾ ನಾಗ್ ಸೇವೆಯಲ್ಲಿ ಮುಂದುವರೆಯುವಂತೆ ಮನವೊಲಿಸಲಾಗುವುದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ನಾಳೆ ಮೈಸೂರು ಪ್ರವಾಸ ಕೈಗೊಂಡಿದ್ದು, ಖುದ್ದು ಭೇಟಿಯಾಗಿ ಮಾತನಾಡುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com