ರಾಜ್ಯ

ದುರ್ಬಲ ವರ್ಗದವರಿಗೆ ಕೋವಿಡ್ ಲಸಿಕೆ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ 'ಹೈ' ಸೂಚನೆ

ದುರ್ಬಲ ವರ್ಗದವರಿಗೆ ಕೋವಿಡ್ ಲಸಿಕೆ: ವರದಿ ಸಲ್ಲಿಸುವಂತೆ ಬಿಬಿಎಂಪಿಗೆ 'ಹೈ' ಸೂಚನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಹಿರಿಯ ನಾಗರಿಕರು, ಅಂಗವಿಕಲರು, ಕೊಳಗೇರಿ ನಿವಾಸಿಗಳು, ದುರ್ಬಲ ವರ್ಗದವರಿಗೆ ಕೊರೋನಾ ಲಸಿಕೆ ನೀಡುವ ಕುರಿತು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. 

ಕೋವಿಡ್‌ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.

ದುರ್ಬಲವರ್ಗದವರಿಗೆ ಲಸಿಕೆ ನೀಡುವ ಕುರಿತು ಕ್ರಮಕೈಗೊಳ್ಳುವಂತೆ ಮೇ.25ರಂದು ಆದೇಶ ನೀಡಲಾಗಿತ್ತು. ಇದನ್ನು ಪರಿಗಣಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಎನ್​ಜಿಒಗಳ ಸಹಕಾರ ಪಡೆದು ಹಿರಿಯ ನಾಗರಿಕರು, ಅಂಗವಿಕಲರು, ಕೊಳಗೇರಿ ನಿವಾಸಿಗಳು, ದುರ್ಬಲ ವರ್ಗದವರಿಗೆ ಲಸಿಕೆ ವಿತರಣೆ ಮಾಡುವಂತೆ ಮಾಡಬೇಕು, ವಿಶೇಷ ಅಭಿಯಾನಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಎಂದು ಸೂಚಿಸಿದೆ.

ಅಲ್ಲದೆ, ಆದ್ಯತೆಯ ಮೇರೆಗೆ ಲಸಿಕೆ ಹಾಕಲು ಗುರುತಿನ ಚೀಟಿಗೆ ಬದಲಾಗಿ ಅಂಗವಿಕಲರ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಗಣಿಸಲು ಮಾರ್ಗಸೂಚಿಗಳನ್ನು ಮಾರ್ಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.