ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ತಾರ್ಕಿಕ ಅಂತ್ಯ; ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ವರ್ಗಾವಣೆ

ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ದೊರೆತಿದ್ದು, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ತಾರ್ಕಿಕ ಅಂತ್ಯ; ರೋಹಿಣಿ ಸಿಂಧೂರಿ, ಶಿಲ್ಪಾನಾಗ್ ವರ್ಗಾವಣೆ
Updated on

ಬೆಂಗಳೂರು: ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ದೊರೆತಿದ್ದು, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕೋವಿಡ್ ನಿರ್ವಹಣೆ ಸಂಬಂಧ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವೆ ವಾಗ್ವಾದ ಏರ್ಪಟ್ಟಿತ್ತು, ಶಿಲ್ಪಾನಾಗ್ ರಾಜಿನಾಮೆ ನೀಡಿ ಬಹಿರಂಗವಾಗಿಯೇ ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಿಡಿಕಾರಿದ್ದರು. ಇದಕ್ಕೆ ರೋಹಿಣಿ  ಸಿಂಧೂರಿ ಅವರೂ ಕೂಡ ತಿರುಗೇಟು ನೀಡಿದ್ದರು. ಬಳಿಕ ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ಕೂಡ ನೀಡಿತ್ತು. ಇದೀಗ ಇಬ್ಬರೂ ಅಧಿಕಾರಿಗಳು ವರ್ಗಾವಣೆ ರಾಜ್ಯ ಸರ್ಕಾರ ವಿವಾದಕ್ಕೆ ತಾರ್ಕಿಕ ತೆರೆ ಎಳೆದಿದೆ.

ಧಾರ್ಮಿಕ ದತ್ತಿ ಇಲಾಖೆಗೆ ರೋಹಣಿ ಸಿಂಧೂರಿ
ಮೂಲಗಳ ಪ್ರಕಾರ ಮೈಸೂರು ಡಿಸಿಯಾಗಿದ್ದ ರೋಹಣಿ ಸಿಂಧೂರಿ ಅವರನ್ನು ಅವರು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದ್ದು, ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ.

ಅಂತೆಯೇ ಮೈಸೂರು ಮಹಾನಗರ  ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com