ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ; ಪ್ರಹ್ಲಾದ ಜೋಷಿ

ರಾಜ್ಯದಲ್ಲಿ  ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಕೊಡಿಸುವ ಯಾವುದೇ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಪ್ರಹ್ಲಾದ್ ಜೋಷಿ
ಪ್ರಹ್ಲಾದ್ ಜೋಷಿ
Updated on: 

ಹುಬ್ಬಳ್ಳಿ: ರಾಜ್ಯದಲ್ಲಿ  ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಕೊಡಿಸುವ ಯಾವುದೇ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ  ಬದಲಾವಣೆ ವಿಚಾರವಾಗಿ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದ ಅವರು ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಇತ್ತೀಚಿಗೆ ಪದೆ ಪದೆ ಚೆರ್ಚೆಗೆ ಬಂದ ಹಿನ್ನೆಲೆ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ  ಅವರು  ರೀತಿ ಹೇಳಿರಬಹುದು . ಮುಖ್ಯಮಂತ್ರಿಗಳು  ಕೊವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಕೊರೋನಾ ಸಂಕಷ್ಟ ಕಾಲದಲ್ಲಿ ಈ ಇಳಿ ವಯಸ್ಸಿನಲ್ಲೂ ಉತ್ತಮ ಕೆಲಸ ಮಾಡುತ್ತಿದ್ದಾರೆ . ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥರಿದ್ದಾರೆ , ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಜೋಷಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com