ಕೇಂದ್ರದಿಂದ ಎಲ್ಲರಿಗೂ ಉಚಿತ ಲಸಿಕೆ ಘೋಷಣೆ: ಪ್ರಧಾನಿ ಮೋದಿ ಕಾರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ

18 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಕೇಂದ್ರ ಸರ್ಕಾರ ಉಚಿತ ಲಸಿಕೆ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಶ್ಲಾಘಿಸಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Updated on

ಬೆಂಗಳೂರು: 18 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಕೇಂದ್ರ ಸರ್ಕಾರ ಉಚಿತ ಲಸಿಕೆ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಶ್ಲಾಘಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ತಡವಾಗಿಯಾದರೂ ಉತ್ತಮ ನಿರ್ಧಾರಕ್ಕೆ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆಲ್ಲಾ ಉಚಿತ ಲಸಿಕೆ ಘೋಷಿಸಿದ್ದು, ಲಸಿಕೆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರಾಹುಲ್ ಗಾಂಧಿ ಅವರ ಮಾತು ಕೇಳಿದ್ದರೇ ಕೊರೋನಾ ಎರಡನೇ ಅಲೆಯಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಬಹುದಿತ್ತು,  ಮೂರನೇ ಅಲೆಯಿಂದ ರಕ್ಷಿಸಿಕೊಳ್ಳಲು ದಿನಕ್ಕೆ 1 ಕೋಟಿ ಭಾರತೀಯರಿಗೆ ಲಸಿಕೆ ಹಾಕಬೇಕಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ಘೋಷಿಸಿದರು. ಗೌರವಾನ್ವಿತ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com