ಬೆಂಗಳೂರು: ಕೊರೋನಾ 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ 3ನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ಸಲ್ಲಿಸುವವರೆಗೆ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಎಂದು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೊರೋನಾ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಕುರಿತ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು.
ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳುವ ಸಂಬಂಧ ವರದಿ ನೀಡಲು ರಚಿಸಿರುವ ಕಾರ್ಯಪಡೆ ವರದಿ ನೀಡಿ, ಅದರ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಬಾರದು ಅಥವಾ ರದ್ದುಗೊಳಿಸಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿತು.
ಬಿಬಿಎಂಪಿ ವಕೀಲರು, ಯಾವುದೇ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಿಲ್ಲ್. ಮೂರನೇ ಅಲೆ ಎದುರಿಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಇನ್ನೂ ನಗರದ 1,311 ಕೊಳೆಗೇರಿಗಳಲ್ಲಿ ಈ ವರೆಗೆ ಸುಮಾರು 10,91,692 ಮಂದಿಗೆ ಲಸಿಕೆ ಹಾಕಲಾಗಿದೆ. ಲಸಿಕೆ ಅಭಿಯಾನ ಮುಂದುವರಿದಿದೆ ಎಂದು ತಿಳಿಸಿದರು.
Advertisement