ಕಳಚಿದ ಸಾಹಿತ್ಯ ಲೋಕದ ಕೊಂಡಿ: ಕವಿ ಡಾ. ಸಿದ್ದಲಿಂಗಯ್ಯ ಕೊರೋನಾದಿಂದ ನಿಧನ

ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಡಾ.ಸಿದ್ದಲಿಂಗಯ್ಯ
ಡಾ.ಸಿದ್ದಲಿಂಗಯ್ಯ
Updated on

ಬೆಂಗಳೂರು: ಕಳೆದೊಂದು ತಿಂಗಳಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು. 

ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಸಿದ್ದಲಿಂಗಯ್ಯ ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ 'ಮಾಗಡಿ' ತಾಲ್ಲೋಕಿನ 'ಮಂಚನಬೆಲೆ' ಗ್ರಾಮದಲ್ಲಿ ೧೯೫೪ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರ ಕವಿತೆಗಳು, ಸಮಕಾಲೀನ ಕನ್ನಡ ಕವಿತೆ ಭಾಗ-೩,೪ (ಸಂಪಾದನೆ ಇತರರೊಂದಿಗೆ), ಏಕಲವ್ಯ, ನೆಲಸಮ, ಪಂಚಮ, ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2, ಆತ್ಮಕಥೆಯಾದ ಊರುಕೇರಿ- ಭಾಗ-1 ಮತ್ತು ಬಾಗ 2 ಸೇರಿ ಅನೇಕ ಕೃತಿಗಳನ್ನು ಸಿದ್ದಲಿಂಗಯ್ಯ ರಚಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳಿಗೆ ಭಾಜನವಾಗಿದ್ದ ಸಿದ್ದಲಿಂಗಯ್ಯನವರು ಶ್ರವಣಬೆಳಗೊಳದಲ್ಲಿ ನಡೆದ ೮೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com