ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಿಂಗ್ ಪಿನ್ ನರೇಶ್ ಗೌಡ, ಶ್ರವಣ್ ಎಸ್ ಐಟಿ ಮುಂದೆ ಹಾಜರು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಜೊತೆ ಆಗಮಿಸಿರುವ ಆರೋಪಿಗಳು ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿ ಎಸ್ಐಟಿ ಮುಂದೆ ಹಾಜರಾಗಿದ್ದಾರೆ. ನರೇಶ್ ಮತ್ತು ಶ್ರವಣ್ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಅವರು ತನಿಖೆಗೆ ಹಾಜರಾಗಿದ್ದಾರೆ. ಐದು ದಿನಗಳ ಒಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಇಬ್ಬರಿಗೂ ಸೂಚನೆ ನೀಡಿತ್ತು, ಸಿಡಿ ಕಿಂಗ್‌ಪಿನ್‌ಗಳಾದ ನರೇಶ್ ಮತ್ತು ಶ್ರವಣ್ ಅವರನ್ನು ಬಂಧನದ ಅವಶ್ಯವಿದ್ದರೆ ಬಂಧಿಸಬಹುದು.
ಬಂಧಿಸಲು ಎಸ್ಐಟಿ ತನಿಖಾಧಿಕಾರಿಗಳುಸ್ವತಂತ್ರ ಎಂದು ಕೋರ್ಟ್ ಹೇಳಿದೆ. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿರುವ ಆರೋಪಿಗಳಿಬ್ಬರನ್ನು ಎಸ್ಐಟಿ ಪೊಲೀಸರು ತಮ್ಮ ವಶಕ್ಕೆ ಪಡೆಯುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್ ಗೌಡ ಹಾಗೂ ಶ್ರವಣ್ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ