ಸಂಗ್ರಹ ಚಿತ್ರ
ರಾಜ್ಯ
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಆತ್ಮಹತ್ಯೆ
ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.
ಹುಬ್ಬಳ್ಳಿ: ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಿವ ಘಟನೆ ವರದಿಯಾಗಿದೆ.
ಮೃತನು ಹುಬ್ಬಳ್ಳಿಯ ರಣದಮ್ಮ ಕಾಲನಿಯ ನಿವಾಸಿಯಾಗಿದ್ದು 78 ವರ್ಷ ವಯಸ್ಸಾಗಿತ್ತು. ಈತ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಕೊರೋನಾ ದೃಢಪಟ್ಟ ಬಳಿಕ ಕಿಮ್ಸ್ ಗೆ ದಾಖಲಾಗಿದ್ದ ಆ ವ್ಯಕ್ತಿ ಮಾನಸಿಕವಾಗಿ ಕುಗ್ಗಿ ಹೋಗಿದ್ದು ಆಸ್ಪತ್ರೆಯ ಕೋವಿಡ್ ವಾರ್ಡ್ ನಂ.303 ರ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ