ಮಣ್ಣಲ್ಲಿ ಮಣ್ಣಾದ 'ಸಂಚಾರಿ' ವಿಜಯ್; ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ಬೈಕ್ ಅಪಘಾತದಲ್ಲಿ ಮೃತರಾದ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ನೆರವೇರಿತು.
ನಟ ಸಂಚಾರಿ ವಿಜಯ್
ನಟ ಸಂಚಾರಿ ವಿಜಯ್

ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಮೃತರಾದ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಸ್ವಗ್ರಾಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ನೆರವೇರಿತು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯ ಸಮೀಪದಲ್ಲಿರುವ ಸ್ನೇಹಿತ ರಘು ಅವರ ತೋಟದಲ್ಲಿ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. 

ಶ್ರೀಗಳ ನಿರ್ದೇಶನದಂತೆ ವಿಜಯ್ ಅವರ ಸಹೋದರರು ಅಂತಿಮ ವಿಧಿ ವಿಧಾನ ನೆರವೇರಿಸಿದರು. ಸಮಾಧಿ ಜಾಗಕ್ಕೆ ಬಿಲ್ವಪತ್ರೆ ವಿಭೂತಿ ಹಾಕಿ ಅಂತಿಮ ಪೂಜೆ ಸಲ್ಲಿಸಲಾಯಿತು. 

ಪೊಲೀಸ್ ಗೌರವ
ಇದಕ್ಕೂ ಮೊದಲು ರಾಜ್ಯ ಸರ್ಕಾರದ ವತಿಯಿಂದ ನಟ ಸಂಚಾರಿ ವಿಜಯ್ ಗೆ ಪೊಲೀಸ್ ಗೌರವ ನೀಡಲಾಯಿತು. ಸಮಾಧಿ ಸ್ಥಳದಲ್ಲಿ ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಅಂತಿಮ ವಿದಾಯ ಹೇಳಿದರು.

ಬಂಧುಮಿತ್ರರಿಗೆ ಅಂತಿಮ ದರ್ಶನಕ್ಕೆ ಅವಕಾಶ
ಅಂತೆಯೇ ಸಮಾಧಿ ಸ್ಥಳದಲ್ಲೇ ಸ್ಥಳೀಯ ಸ್ನೇಹಿತರು ಮತ್ತು ಬಂಧು ಮಿತ್ರರಿಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕೋವಿಡ್ ನಿರ್ಬಂಧದ ಹೊರತಾಗಿಯೂ ನೂರಾರು ಮಂದಿ ಸಮಾಧಿ ಸ್ಥಳಕ್ಕೆ ಬಂದು ವಿಜಯ್ ಅವರ ಅಂತಿಮ ದರ್ಶನ ಪಡೆದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com