ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ

ಕೋಲಾರ ಜಿಲ್ಲೆಯಲ್ಲಿ ನಾಲ್ಕು ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ಅರವಿಂದ ಲಿಂಬಾವಳಿ

ನಾಲ್ಕು ಆಮ್ಲಜನಕ ಉತ್ಪಾದನಾ ಘಟಕಗಳು ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿವೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ  ಅರವಿಂದ ಲಿಂಬಾವಳಿ ಹೇಳಿದ್ದಾರೆ.
Published on

ಕೋಲಾರ: ನಾಲ್ಕು ಆಮ್ಲಜನಕ ಉತ್ಪಾದನಾ ಘಟಕಗಳು ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿವೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ  ಅರವಿಂದ ಲಿಂಬಾವಳಿ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅರವಿಂದ ಲಿಂಬಾವಳಿ, ಎಲ್ಲಾ ನಾಲ್ಕು ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸಾಮಾಜಿಕ ಸಾಂಸ್ಥಿಕ ಜವಾಬ್ದಾರಿ ಪ್ರಾಯೋಜಕತ್ವದಲ್ಲಿ ಸ್ಥಾಪನೆ ಮಾಡಲಾಗುವುದು.

ಜಿಲ್ಲಾಧಿಕಾರಿ ಸೆಲ್ವಮಣಿ ಉತ್ತಮ ರೀತಿಯಲ್ಲಿ ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಲಿಂಬಾವಳಿ ತಿಳಿಸಿದ್ದಾರೆ. ಇಸ್ರೇಲ್ ಮೂಲದ ಸ್ಥಾವರವನ್ನು ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆಯೇ ಸ್ಥಾಪಿಸಲಾಗಿದ್ದು, ಇದರಿಂದ ಅಲ್ಲಿನ ರೋಗಿಗಳಿಗೆ ಪ್ರಯೋಜನವನ್ನು ನೀಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಆಮ್ಲಜನಕ ಘಟಕಗಳನ್ನು ಆದ್ಯತೆಯ ಆಧಾರದ ಮೇಲೆ ಸ್ಥಾಪಿಸಲಾಗುವುದು ಎಂದು ಡಾ.ಸೆಲ್ವಮಣಿ ತಿಳಿಸಿದ್ದಾರೆ. ಜಿಎಂಆರ್ ಅಧಿಕಾರಿಗಳು (ವಿಮಾನ ನಿಲ್ದಾಣ) ಒದಗಿಸುವ ನಾಲ್ಕು ಸ್ಥಾವರಗಳಲ್ಲಿ ಎರಡು ಶ್ರೀನಿವಾಸಪುರ ಮತ್ತು ಮುಳಬಾಗಿಲಿನಲ್ಲಿ ಸ್ಥಾಪಿಸಲಾಗುವುದು. ವಿಸ್ಟ್ರಾನ್ ಕಾರ್ಪೊರೇಶನ್‌ನ ಮೂರನೆಯದನ್ನು ಮಾಲೂರಿನಲ್ಲಿ ಮತ್ತು   ಬಂಗಾರಪೇಟೆ ಆಸ್ಪತ್ರೆಯಲ್ಲಿ ಯುಎಸ್ ಮೂಲದ ಎನ್ ಜಿ ನೀಡುವ ಘಟಕವನ್ನು ಸ್ಥಾಪಿಸಲಿದೆ ಎಂದು ತಿಳಿಸಿದ್ದಾರೆ.

ಈ ಎಲ್ಲಾ ಆಮ್ಲಜನಕ ಸ್ಥಾವರಗಳು 100 ಹಾಸಿಗೆಗಳಿಗೆ ಆಕ್ಸಿಜನ್ ಒದಗಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಸೆಲ್ವಮಣಿ ಹೇಳಿದರು. ಕೆಲವು ಕಂಪನಿಗಳು ಆರೋಗ್ಯ ಕಿಟ್‌ಗಳನ್ನು ನೀಡಲು ಮುಂದೆ ಬರುತ್ತಿವೆ ಎಂದು ಅವರು ತಿಳಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಕೋವಿಡ್ ಸಕಾರಾತ್ಮಕತೆ ಪ್ರಮಾಣವು 2.5% ಕ್ಕಿಂತ ಕಡಿಮೆಯಾಗಿದೆ ಮತ್ತು ಮತ್ತಷ್ಟು ಕುಸಿಯುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com