ದೇಶೀಯ ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಅಳವಡಿಕೆ: ಭಾರತದ ರೈತರ ಆದಾಯ ದ್ವಿಗುಣವಾಗಲು ನೆರವು

ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿ ಕರ್ನಾಟಕದಲ್ಲಿ ಸ್ಥಾಪಿಸಿರುವ 3 ಉತ್ಕೃಷ್ಟತಾ ಕೇಂದ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್  ವರ್ಚ್ಯೂವಲ್ ಆಗಿ ಉದ್ಘಾಟಿಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿ ಕರ್ನಾಟಕದಲ್ಲಿ ಸ್ಥಾಪಿಸಿರುವ 3 ಉತ್ಕೃಷ್ಟತಾ ಕೇಂದ್ರಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್  ವರ್ಚ್ಯೂವಲ್ ಆಗಿ ಉದ್ಘಾಟಿಸಿದರು.

ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಎಂಐಡಿಎಚ್ ವಿಭಾಗ ಮತ್ತು ಇಸ್ರೇಲ್‌ನ ಅಂತರರಾಷ್ಟ್ರೀಯ ಅಭಿವೃದ್ಧಿ ಸಹಕಾರ ಸಂಸ್ಥೆ - ಎಂಎಎಸ್ಎಚ್ಎವಿ ಇಸ್ರೇಲ್‌ನ ಅತಿದೊಡ್ಡ ಸರ್ಕಾರದಿಂದ ಸರ್ಕಾರದ (ಜಿ 2 ಜಿ) ಸಹಕಾರವನ್ನು ಮುನ್ನಡೆಸುತ್ತಿವೆ. ದೇಶದಾದ್ಯಂತ 12 ರಾಜ್ಯಗಳಲ್ಲಿ 29 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳೊಂದಿಗೆ ಸುಧಾರಿತ ಇಸ್ರೇಲಿ ಕೃಷಿ- ತಂತ್ರಜ್ಞಾನವನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅಳವಡಿಸಿ ಅನುಷ್ಠಾನಗೊಳಿಸಲಾಗುತ್ತಿದೆ.

ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನಕ್ಕೆ ಇಸ್ರೇಲ್ ತಂತ್ರಜ್ಞರ ನೆರವು ಈ 29 ಕೇಂದ್ರ ಸ್ಥಾಪನೆಯ ಕಾರ್ಯಾಚರಣೆಯಲ್ಲಿ 3 ಸಿಒಇಗಳು ಕೇಂದ್ರಗಳು ಕರ್ನಾಟಕದಲ್ಲಿವೆ. ಕೋಲಾರದಲ್ಲಿ ಮಾವು ಬೆಳೆ, ಬಾಗಲಕೋಟೆಯಲ್ಲಿ ದಾಳಿಂಬೆ, ಧಾರವಾಡದಲ್ಲಿ ತರಕಾರಿಗಳಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಉತ್ಕೃಷ್ಟತಾ ಕೇಂದ್ರಗಳು ಜ್ಞಾನ ವೃದ್ಧಿ ಉತ್ತಮ ಅಭ್ಯಾಸ ಪ್ರದರ್ಶನದ ಜೊತೆಗೆ ಅಧಿಕಾರಿಗಳು ಮತ್ತು ರೈತರಿಗೆ ತರಬೇತಿ ನೀಡುತ್ತವೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ‘ಈ ಉತ್ಕೃಷ್ಟತಾ ಕೇಂದ್ರಗಳು ಕರ್ನಾಟಕದಲ್ಲಿ ತೋಟಗಾರಿಕಾ ಬೆಳೆಗಳ ಉತ್ಪಾದನೆ ವೃದ್ಧಿ, ಗುಣಮಟ್ಟ ಹೆಚ್ಚಳಕ್ಕೆ ಸಹಕಾರಿಯಾಗಲಿವೆ. ಹೊಸ ತಂತ್ರಜ್ಞಾನಗಳು ರೈತರಿಗೆ ಲಭ್ಯವಾಗಲಿದ್ದು, ಸುಸ್ಥಿರ ಕೃಷಿ ಮತ್ತು ಹೆಚ್ಚಿನ ಗಳಿಕೆಗೆ ನೆರವಾಗಲಿವೆ’ ಎಂದರು. 

ಉತ್ಕೃಷ್ಟ ಗ್ರಾಮಗಳ ನಿರ್ಮಾಣಕ್ಕೆ ಯೋಜನೆ ಭಾರತ ಮತ್ತು ಇಸ್ರೇಲ್‌ ಸಹಯೋಗದಲ್ಲಿ ಮಾದರಿ ಕೃಷಿ ಪರಿಸರವನ್ನು ಒಳಗೊಂಡ ‘ಉತ್ಕೃಷ್ಟ ಗ್ರಾಮ’ಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಕರ್ನಾಟಕವೂ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಯೋಜನೆ ಜಾರಿಗೆ ಬರಲಿದೆ. ಬಾಗಲಕೋಟೆ ಮತ್ತು ಕೋಲಾರ ಉತ್ಕೃಷ್ಟತಾ ಕೇಂದ್ರಗಳ ಜತೆ ಸಂಪರ್ಕ ಹೊಂದಿರುವ 10 ಹಳ್ಳಿಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ . ಕರ್ನಾಟಕದಲ್ಲಿ ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ವರ್ಗಾಯಿಸಲು ಸಮ್ಮತಿಸಿದ ಇಸ್ರೇಲ್ ದೇಶಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧನ್ಯವಾದ ತಿಳಿಸಿದರು.  . ಇದು ಇಸ್ರೇಲ್ ಮತ್ತು ಭಾರತೀಯ ರೈತರ ನಡುವಿನ ಸಹಯೋಗವನ್ನು ಬಲಪಡಿಸುತ್ತದೆ ಎಂದು ಇಸ್ರೇಲಿ ಕೌನ್ಸಲ್ ಜನರಲ್ ಜೋನಾಥನ್ ತಡ್ಕಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com