ಬೆಳಗಾವಿ: ಬ್ಲ್ಯಾಕ್ ಫಂಗಸ್ ಚುಚ್ಚುಮದ್ದು ಅಕ್ರಮ ಮಾರಾಟ ನಡೆಸಿದ್ದ ಇಬ್ಬರ ಸೆರೆ

ಆಂಫೊಟೆರಿಸಿನ್ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಳಗಾವಿ: ಆಂಫೊಟೆರಿಸಿನ್ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬ್ಲ್ಯಾಕ್ ಫಂಗಸ್ ಔಷಧದ ಮೂಲ ಬೆಲೆ 310 ರೂಪಾಯಿಗಳು, ಆದರೆ ಅವರು ಮೂರು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ ಪೊಲೀಸರು ಖಾಸಗಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ 28 ಬಾಟಲುಗಳನ್ನು (50 ಮಿಗ್ರಾಂ) ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com