ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಪ್ರತಿಭಟನೆಗೆ ಕೈಜೋಡಿಸಿದ ಕರ್ನಾಟಕ ವೈದ್ಯರು 

ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿರುವ ದೇಶಾದ್ಯಂತ ಪ್ರತಿಭಟನೆಗೆ ರಾಜ್ಯದಲ್ಲಿಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಿನ್ನೆ ರಾಜ್ಯದ 3 ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಹಲ್ಲೆ ಖಂಡಿಸಿ, ಜೀವಕ್ಕೆ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರ ಪ್ರತಿಭಟನೆ
ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರ ಪ್ರತಿಭಟನೆ

ಬೆಂಗಳೂರು: ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿರುವ ದೇಶಾದ್ಯಂತ ಪ್ರತಿಭಟನೆಗೆ ರಾಜ್ಯದಲ್ಲಿಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಿನ್ನೆ ರಾಜ್ಯದ 3 ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಹಲ್ಲೆ ಖಂಡಿಸಿ, ಜೀವಕ್ಕೆ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಕಪ್ಪು ಬ್ಯಾಂಡ್ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು. ಕೆಲವರು ಘೋಷಣೆಗಳನ್ನು ಕೂಗಿದರು. ವೃತ್ತಿಪರ ಕರಾಟೆ ತರಬೇತುದಾರರು ನಡೆಸಿದ ಸ್ವ ರಕ್ಷಣೆ ಕಾರ್ಯಾಗಾರದಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರು ಭಾಗಿಯಾಗಿದ್ದರು.

ಐಎಂಎಯ ಯಲಹಂಕ ವಲಯದ ವೈದ್ಯರು ಪ್ರಧಾನ ಮಂತ್ರಿಗೆ ಪತ್ರ ಬರೆದು ವೈದ್ಯರು ಮತ್ತು ಆರೋಗ್ಯ ಸೇವೆ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ನಿಲ್ಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ರೆಗಲ್ ಆಸ್ಪತ್ರೆಯ ಡಾ ವಿ ಸೂರಿ ರಾಜು, ಈ ವಿಷಯ ಪರಿಸ್ಥಿತಿಯಲ್ಲಿ ವೈದ್ಯರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ ಕೆಲವು ಕಡೆ ವೈದ್ಯರು, ಆರೋಗ್ಯ ವಲಯ ಸೇವಕರ ಮೇಲೆ ಹಲ್ಲೆ, ಹಿಂಸಾಚಾರ ಮುಂದುವರಿಯುತ್ತಲೇ ಇದೆ. ಇಂತಹ ಸನ್ನಿವೇಶಗಳಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ. ಇಂತಹ ಪರಿಸ್ಥಿತಿಯಿರುವುದರಿಂದಲೇ ಹಲವು ಆಸ್ಪತ್ರೆಗಳಲ್ಲಿ ಗಂಭೀರ ಸ್ವರೂಪದಲ್ಲಿರುವ ರೋಗಿಗಳನ್ನು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com