ರಾಜ್ಯದಲ್ಲಿ ಮುಂಗಾರು ಚುರುಕು: ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರಂಜೆ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮುಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com